ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ವೂಡೇ ಪಿ. ಕೃಷ್ಣರವರಿಗೆ ಅಭಿನಂದನೆ.
ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ, ಹಿರಿಯ ಶಿಕ್ಷಣ ತಜ್ಞ, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌ|| ಪ್ರಧಾನ ಕಾರ್ಯದರ್ಶಿ ಡಾ. ವೂಡೇ ಪಿ. ಕೃಷ್ಣರವರು ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ 28ನೇ ನುಡಿಹಬ್ಬದಲ್ಲಿ ನೀಡುವ ಪ್ರತಿಷ್ಠಿತ ನಾಡೋಜ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವ ಸನ್ಮಾನ ಪುರಸ್ಕೃತರಾದ ಡಾ.ವೂಡೇ ಪಿ. ಕೃಷ್ಣ ಈ ನಾಡು ಕಂಡ ಅಪರೂಪದ ವ್ಯಕ್ತಿತ್ವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇತ್ತೀಚೆಗೆ ಇವರ ಬದುಕು-ಬರಹ ಸಾಧನೆಗಳನ್ನು ಒಳಗೊಂಡ ಸಾಕ್ಷ್ಯಚಿತ್ರ ರೂಪಿಸಿದೆ. ನ.10ರಂದು ಹಂಪಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ವಿವಿ ಕುಲಾಧಿಪತಿಗಳಾದ ರಾಜ್ಯಪಾಲ ವಾಜುಭಾಯ್ ವಾಲಾರವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಹಾಗು ಅಮರ ಬಾಪು ಚಿಂತನ ಪತ್ರಿಕೆಯ ಸಂಪಾದಕ ಶ್ರೀ ಜೀರಿಗೆ ಲೋಕೇಶ್ ಅಭಿನಂದಿಸಿದರು. ಶ್ರೀಯುತರ ಸೇವೆ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ದೊರೆಯಲಿ ಎಂದು ಅಭಿನಂದನೆ ಸಲ್ಲಿಸಿದ ಜೀರಿಗೆ ಲೋಕೇಶ್ ತಿಳಿಸಿದ್ದಾರೆ ಜೊತೆಯಲ್ಲಿ ಖಜಾಂಚಿ ಪ್ರೊ. ಪ್ರತಾಪ್ ಲಿಂಗಯ್ಯ ಇದ್ದರು.
ಹೆಚ್ಚಿನ ಬರಹಗಳಿಗಾಗಿ
ವಿವೇಕ ದರ್ಶನ
ಪಂಚ ದ್ರಾವಿಡ ಭಾಷಾ ಅನುವಾದಕರ ಸಂಘ ರಚನೆ
‘ರತಿಯ ಕಂಬನಿ’ ಉದುರುವ ಸಂಭ್ರಮ