ನೂರು ದೇವರನೆಲ್ಲ ನೂಕಾಚೆ ದೂರ
ಭಾರತಾಂಬೆಯೇ ದೇವಿ ನಮಗಿಂದು
ಪೂಜಿಸುವ ಬಾರಾ ಬಾರಾ….
ಶತಮಾನಗಳು ಬರಿಯ ಜಡಶಿಲೆಯ ಪೂಜಿಸಾಯ್ತು
ಹಾವುಗಳಿಗೆ ಹಾಲೆರೆದು ಪೋಷಿಸಾಯ್ತು
ಬಿಸಿಲು ಮಳೆ ಗಾಳಿ ಬೆಂಕಿಯನೆಲ್ಲ ಬೇಡಿಯಾಯ್ತು
ದಾಸರನು ಪೂಜಿಸಿಯೇ ದಾಸ್ಯವಾಯ್ತು.
ಭಾರತಾಂಬೆಯೇ ದೇವಿ….
ಗುಡಿಯೊಳಗೆ ಕಣ್ಮುಚ್ಚಿ ಬೆಚ್ಚಗಿರುವರನೆಲ್ಲ
ಭಕ್ತ ರಕ್ತವ ಹೀರಿ ಕೊಬ್ಬಿಹರನೆಲ್ಲ
ಘಂಟೆ ಜಾಗಟೆಗಳಿಂ ಬಡಿದು ಕುತ್ತಿಗೆ ಹಿಡಿದು
ಕಡಲಡಿಗೆ ತಳ್ಳಿರೈ ಶಂಖದಿಂ ನುಡಿದು.
ಭಾರತಾಂಬೆಯೇ ದೇವಿ….
ಸತ್ತ ಕಲ್ಗಳ ಮುಂದೆ ಅತ್ತು ಕರೆದುದು ಸಾಕು
ಜೀವದಾತೆಯನಿಂದು ಕೂಗಬೇಕು
ಶಿಲೆಯ ಮೂರ್ತಿಗೆ ನೇಯ್ದ ಕಲೆಯ ಬಲೆಯನು ಒಯ್ದು
ಚಳಿಯು ಮಳೆಯಲಿ ನವೆವ ತಾಯ್ಗೆ ಹಾಕು.
ಭಾರತಾಂಬೆಯೇ ದೇವಿ….
ಹೆಚ್ಚಿನ ಬರಹಗಳಿಗಾಗಿ
ಡಾಗ್ನಿ ಕಾರ್ಲ್ಸನ್ ಎಂಬ ಸೂಪರ್ ಸ್ಫೂರ್ತಿ
ಮುಂಬಯಿ ಆಕಾಶವಾಣಿಯಲ್ಲಿ ನನ್ನ ಪಯಣ..
ರಾಣಿ…