“ಸತ್ಯ ಪಥದ ನಿತ್ಯ ಸಂತ” ಕೃತಿಗೆ ಲಿಂ.ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ
2019ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ರಾಜ್ಯ ಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಲ್ಲಿ ಒಂದಾದ ಲಿಂ.ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿಗೆ ಯುವ ಲೇಖಕಿ ಸುಮ ಚಂದ್ರಶೇಖರ್ ರಚಿಸಿರುವ ಗಾಂಧಿ ವ್ಯಕ್ತಿತ್ವ ದರ್ಶನದ ‘ಸತ್ಯ ಪಥದ ನಿತ್ಯ ಸಂತ’ ಕೃತಿ ಆಯ್ಕೆಯಾಗಿದೆ.
ಸದರಿ ಕೃತಿಯು ಮಹಾತ್ಮ ಗಾಂಧೀಜಿ 150ನೇ ಜಯಂತಿ ವರ್ಷಾಚರಣೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಯುವ ಬರಹಗಾರರಿಗೆ ಪ್ರೋತ್ಸಾಹ ಧನ ಯೋಜನೆಯಡಿಯಲ್ಲಿ ಪ್ರಕಟವಾಗಿದ್ದು, 18 ಅಧ್ಯಾಯಗಳಲ್ಲಿ ಮಹಾತ್ಮ ಗಾಂಧೀಜಿಯವರ ಜೀವನ-ಸಂದೇಶಗಳ ಕುರಿತು ರಚಿಸಿರುವ ಲೇಖನಗಳ ಸಂಗ್ರಹವಾಗಿದೆ.
ಬರವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಭರವಸೆಯ ಯುವ ಬರಹಗಾರ್ತಿ ಸುಮ ಚಂದ್ರಶೇಖರ್ ಅವರ ಅನೇಕ ಲೇಖನಗಳು ನಾಡಿನ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಗಾಂಧಿಸ್ಮøತಿ ಪುರಸ್ಕಾರ ಮತ್ತು ಕನ್ನಡ ಮಾಣಿಕ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹೆಚ್ಚಿನ ಬರಹಗಳಿಗಾಗಿ
ವಿವೇಕ ದರ್ಶನ
ಪಂಚ ದ್ರಾವಿಡ ಭಾಷಾ ಅನುವಾದಕರ ಸಂಘ ರಚನೆ
‘ರತಿಯ ಕಂಬನಿ’ ಉದುರುವ ಸಂಭ್ರಮ