ಡಾ. ಬಿ.ಜನಾರ್ದನ ಭಟ್
ಸಾಹಿತಿ ಡಾ. ಬಿ.ಜನಾರ್ದನ ಭಟ್ ಅವರದು ಬಹುಮುಖ ಪ್ರತಿಭೆ. ಅವರು ಕಾದಂಬರಿಕಾರರಾಗಿ, ಕಥೆಗಾರರಾಗಿ, ವಿಮರ್ಶಕರಾಗಿ, ಅಂಕಣಕಾರರಾಗಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಏಳು ಕಾದಂಬರಿಗಳು, ಆರು ಕಥಾ ಸಂಕಲನಗಳು ಜೊತೆಗೆ ಮೂವತ್ತಕ್ಕಿಂತಲೂ ಅಧಿಕ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಇಪ್ಪತ್ತೆರಡು ಅನುವಾದಿತ ಕೃತಿಗಳು ಹಾಗೂ ಇಪ್ಪತ್ತೊಂದು ಸಂಪಾದಿತ ಕೃತಿಗಳನ್ನು ಸಾಹಿತ್ಯ ಪ್ರಪಂಚಕ್ಕೆ ನೀಡಿದವರು