ಡಾ.ಪೂರ್ಣಿಮಾ ಶೆಟ್ಟಿ
ಮುಂಬಯಿಯ ಪ್ರತಿಭಾವಂತ ಲೇಖಕರಲ್ಲಿ ಒಬ್ಬರಾಗಿರುವ ಡಾ.ಪೂರ್ಣಿಮಾ ಶೆಟ್ಟಿ ಅವರು ಉಪನ್ಯಾಸಕಿಯಾಗಿ, ಅತ್ಯುತ್ತಮ ನಿರೂಪಕಿಯಾಗಿ, ವಿಮರ್ಶಕಿಯಾಗಿ, ಸಂಘಟಕಿಯಾಗಿ ಹೆಸರು ಮಾಡಿದ್ದಾರೆ. ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರಕೆ ಡಾ.ಪೂರ್ಣಿಮಾ ಸುಧಾಕರ ಶೆಟ್ಟಿಯವರ ಕೊಡುಗೆ ಅಪಾರವಾದುದು. ಕಾವ್ಯರಚನೆ, ಕೃತಿ ವಿಮರ್ಶೆ, ಸಾಹಿತ್ಯ ಸಂಶೋಧನೆ, ಕೃತಿ ಸಂಪಾದನೆಗಳಷ್ಟೇ ಅಲ್ಲದೆ ಕನ್ನಡ ಸಂಸ್ಕೃತಿಯ ಹಿರಿಮೆ ಗರಿಮೆಯನ್ನು ಕನ್ನಡೇತರರಿಗೆ ತಿಳಿಸಿಕೊಡುವಲ್ಲಿಯೂ ಅವರದ್ದು ಎತ್ತಿದ ಕೈ. ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಒಳ್ಳೆಯ ಪ್ರಭುತ್ವವನ್ನು ಹೊಂದಿರುವ ಅವರು ಕವಿಯಾಗಿ, ಲೇಖಕರಾಗಿ, ವಿಮರ್ಶಕರಾಗಿ ಈಗಾಗಲೇ ಸಾಕಷ್ಟು ಹೆಸರು ಮಾಡಿದ್ದಾರೆ. ಅನೇಕ ವಿಚಾರ ಸಂಕಿರಣಗಳಲ್ಲಿ ಪಾಲ್ಗೊಂಡು ಉಪನ್ಯಾಸವನ್ನು ನೀಡಿರುತ್ತಾರೆ. ಸದ್ಯ ಅವರು ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದಲ್ಲಿ ಸಹಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.