ಡಾ. ಕೆ ವಿ ತಿರುಮಲೇಶ್
ಕಾಸರಗೋಡು ಜಿಲ್ಲೆಯ ಕಾರಡ್ಕ ದಲ್ಲಿ ಜನಿಸಿದ ಕೆ.ವಿ. ತಿರುಮಲೇಶ್ ಕನ್ನಡದ ಮಹತ್ವದ ಬರಹಗಾರ, ಚಿಂತಕ ,ಭಾಷಾಜ್ಞಾನಿ, ಕವಿ, ಕಥೆಗಾರ, ನಾಟಕಕಾರ, ವಿಮರ್ಶಕ. ಸುಮಾರು ಐದು ದಶಕಗಳ ಕಾಲ ಕವಿತೆ, ಕತೆ, ವಿಮರ್ಶೆ, ಅನುವಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ‘ಮುಖವಾಡಗಳು’ ಹಾಗೂ ‘ವಠಾರ’ ಇವರ ಎರಡು ಜನಪ್ರಿಯ ಕೃತಿಗಳು. ಇವರ ೪೦ ಪ್ರಕಟಿತ ಕೃತಿಗಳಲ್ಲಿ ಅವಧ, ವಠಾರ, ಮುಖವಾಡಗಳು, ಪಾಪಿಯೂ ಎಂಬುವು ಮುಖ್ಯ ಕವನ ಸಂಕಲನಗಳು. ಆರೋಪ, ಮುಸುಗು ಇವರ ಕೆಲ ಕಾದಂಬರಿಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಅಸ್ತಿತ್ವವಾದ ಇವು ಇವರ ಮುಖ್ಯ ವಿಮರ್ಶಾ ಕೃತಿಗಳು. ಮಾಲ್ಟ ಲೌರಿಡ್ಜ್ ಬ್ರಿಗ್ಗನ ಟಿಪ್ಪಣಿ ಪುಸ್ತಕ ಇವರ ಅನುವಾದಿತ ಕೃತಿ. ಅಕ್ಷಯ ಕಾವ್ಯ ಕೃತಿಗೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ.