ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ವೈದೇಹಿ

ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ 'ಜಾನಕಿ ಶ್ರೀನಿವಾಸಮೂರ್ತಿ'ಯವರು ಕನ್ನಡದ ಪ್ರಮುಖ ಲೇಖಕಿಯರಲ್ಲೊಬ್ಬರು. ಸಣ್ಣಕಥೆ, ಕಾವ್ಯ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಮುಂತಾದವುಗಳಲ್ಲಿ ತೊಡಗಿಕೊಂಡಿದ್ದಾರೆ. ಸಾಹಿತ್ಯಕ್ಕಾಗಿ ಹಲವು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಕ್ರೌಂಚ ಪಕ್ಷಿಗಳು ಎಂಬ ಕಥಾಸಂಕಲನಕ್ಕೆ ೨೦೦೯ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ದೊರೆತಿದೆ.